Current Date 22 Sep, 2026

"ಸತ್ಯಕ್ಕೆ ಶಾಂತಿಗೆ ಹೆಸರಾದ ದೇಶಕ್ಕೆ ಎಂಥ ಪ್ರಧಾನಿ, ನಾಚಿಕೆಗೇಡು, ದೇಶಕ್ಕೇ ಅವಮಾನ"; ಕಿಶೋರ್

ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ(ಜುಲೈ 1) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. "ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳುವವರು ಸದಾ ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದಿದ್ದರು. ಪ್ರಧಾನಿ ಮೋದಿ ಎದ್ದು ನಿಂತು ಈ ಹೇಳಿಕೆಯನ್ನು ಖಂಡಿಸುವ ಪ್ರಯತ್ನ ಮಾಡಿದ್ದರು.

ರಾಹುಲ್ ಗಾಂಧಿ ಹೇಳಿಕೆಯನ್ನು ಹಲವರು ಸಮರ್ಥಿಸಿಕೊಂಡಿದ್ದಾರೆ. ರಾಹುಲ್ ಹೇಳಿದ್ದರಲ್ಲಿ ತಪ್ಪಿಲ್ಲ, ಅವರ ಭಾಷಣದಲ್ಲಿ ಹಿಂದೂ ಧರ್ಮವನ್ನು ಅವಮಾನಿಸಿದ್ದಾ?" ಎಂದು ಕೇಳುತ್ತಿದ್ದಾರೆ. ಇದೀಗ ಇದೇ ವಿಚಾರದ ಬಗ್ಗೆ ನಟ ಕಿಶೋರ್ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ಗಾಂಧಿ ಭಾಷಣದ ವೇಳೆ ಪ್ರಧಾನಿ ಮೋದಿ ಎದ್ದು ನಿಂತು ಖಂಡಿಸಿದ ವೀಡಿಯೋ ತುಣುಕನ್ನು ಹಂಚಿಕೊಂಡು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.