Current Date 30 Jul, 2026

ತನ್ನ ತಪ್ಪಿಗೆ ಕೈ ಮುಗಿದು ಕ್ಷಮೆ ಕೇಳಿದ ದರ್ಶನ್ ಅಭಿಮಾನಿ


ಸ್ಟಾರ್ ನಟರ ಅಭಿಮಾನಿಗಳ ನಡುವೆ ಕಿರಿಕ್, ಕೆಸರೆರಚಾಟ ಹೊಸದೇನು ಅಲ್ಲ. ತಮ್ಮ ನಟ ಗ್ರೇಟ್ ಎಂದು ಕೊಚ್ಚಿಕೊಳ್ಳುವ ಭರದಲ್ಲಿ ಮತ್ತೊಬ್ಬರನ್ನು ನಿಂದಿಸುವ ಕೆಲಸ ನಡೆಯುತ್ತಿದೆ. ಸೋಶಿಯಲ್ ಮೀಡಿಯಾದಲ್ಲಂತೂ ಇತ್ತೀಚೆಗೆ ಫ್ಯಾನ್ಸ್ ವಾರ್ ಹೆಚ್ಚಾಗಿಬಿಟ್ಟಿದೆ. ಇನ್ನು ಬಾಯಿಗೆ ಬಂದಂತೆ ಮಾತನಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಕೆಲವರು ಬಹಿರಂಗವಾಗಿ ಮಾಧ್ಯಮಗಳ ಮುಂದೆಯೇ ಪುಂಡಾಟ ಪ್ರದರ್ಶಿಸುತ್ತಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ವಿಚಾರಣೆ ನಡೆಸಿತ್ತು. ಈ ವೇಳೆ ಕೆಲ ಅಭಿಮಾನಿಗಳು ಪೊಲೀಸ್ ಠಾಣೆ ಮುಂದೆ ಜಮಾಯಿಸಿ ರಾದ್ಧಾಂತ ಮಾಡಿದ್ದರು. ಈ ಬಗ್ಗೆ ನಟ ಪ್ರಥಮ್ ಕೂಡ ಬೇಸರ ವ್ಯಕ್ತಪಡಿಸಿದ್ದರು. ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಕೂಡ ದರ್ಶನ್ ಮೇಲೆ ಸಾಕಷ್ಟು ಆರೋಪಗಳನ್ನು ಮಾಡಿದ್ದರು. ಹಾಗಾಗಿ ಚೇತನ್ ಎಂಬ ದರ್ಶನ್ ಅಭಿಮಾನಿ ಇಬ್ಬರನ್ನು ಅವಾಚ್ಯ ಪದಗಳಿಂದ ನಿಂದನೆ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು.