Current Date 31 Jul, 2026

''ಬಿಗ್ ಬಾಸ್‌ಗೆ ನಾನು ಬರ್ತಿನಿ,ಸುದೀಪ್ ಸರ್ ಪ್ಲೀಸ್ ನನಗೊಂದು ಅವಕಾಶ ಕೊಡಿ''- ಹುಚ್ಚ ವೆಂಕಟ್....!

ಮಾತೆತ್ತಿದರೆ 'ನನ್ ಎಕ್ಡ ನನ್ ಎಕ್ಡ' ಎನ್ನುತ್ತಾ, ಸಿಕ್ಕ ಸಿಕ್ಕವರ ಜೊತೆ ರಂಪ ರಾಮಾಯಣ ಮಾಡಿಕೊಳ್ತಿದ್ದ ಹುಚ್ಚ ವೆಂಕಟ್ ಬಗ್ಗೆ ಅನೇಕರಲ್ಲಿ ಅನೇಕ ರೀತಿಯ ಅಭಿಪ್ರಾಯಗಳಿವೆ. ಅದು ಏನೇ ಇರಲಿ.. ವೆಂಕಟ್‌ ನಿಜಕ್ಕೂ ಗಂಭೀರ ಸ್ವಭಾವದ ಮನುಷ್ಯ. ನಿಜಾ, ಇವರು ನಿರ್ಮಿಸಿ, ನಿರ್ದೇಶಿಸಿ, ನಟಿಸಿದ ಸಿನಿಮಾಗಳಲ್ಲಿ ಯಾವುದೂ ಲಾಭ ಮಾಡಿಲ್ಲ. ಆದರೆ ವೆಂಕಟ್ ಯಾರಿಗೂ ಮೋಸವನ್ನೂ ಮಾಡಿಲ್ಲ. ಸಿನಿಮಾಗೆ ಕಾರ್ಯನಿರ್ವಹಿಸಿದ ಪ್ರತಿಯೊಬ್ಬರಿಗೂ ಮುಂಗಡವಾಗಿ ಹಣವನ್ನ ಕೊಟ್ಟು ಕೆಲಸ ಮಾಡಿಸಿಕೊಳ್ಳುವ ಗುಣ ವೆಂಕಟ್ ಅವರದ್ದು.