Current Date 25 Aug, 2026

ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಹೊಸ ಸಿನಿಮಾ 'ಹಿರಣ್ಯ' ಶೂಟಿಂಗ್ ಮುಕ್ತಾಯ

ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಈ ಬಾರಿ ಪಕ್ಕಾ ಮಾಸ್ ಆಕ್ಷನ್ ಸಿನಿಮಾದೊಂದಿಗೆ ಪ್ರೇಕ್ಷಕರನ್ನು ರಂಜಿಸಲು ಬರುತ್ತಿದ್ದಾರೆ. ಕೆಲವು ದಿನಗಳಿಂದ ಈ ಸಿನಿಮಾದ ಶೂಟಿಂಗ್ ಅದ್ಧೂರಿಯಾಗಿ ನಡೆಯುತ್ತಿತ್ತು. ಸದ್ಯ ಶೂಟಿಂಗ್ ಕಂಪ್ಲೀಟ್ ಆಗಿ ಮುಗಿದಿದೆ.

ಅಂದ್ಹಾಗೆ ಮ್ಯಾಸೀವ್ ಸ್ಟಾರ್ ರಾಜವರ್ಧನ್ ನಟನೆಯ ಆ ಸಿನಿಮಾವೇ 'ಹಿರಣ್ಯ'. ಈ ಬಹುನಿರೀಕ್ಷಿತ ಸಿನಿಮಾದ ಶೂಟಿಂಗ್ ಮುಗಿದಿದ್ದು, ಬೆಂಗಳೂರು ಹಾಗೂ ಅದರ ಸುತ್ತಮುತ್ತ ಇಡೀ ಸಿನಿಮಾದ ಚಿತ್ರೀಕರಣ ನಡೆದಿದೆ. ಸದ್ಯ ಈ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ.