Current Date 31 Jul, 2026

ಮಾತಾಡೋದಕ್ಕೆ ಎದ್ದು ನಿಂತರೆ ಸಾಕು, ಸಾರಾ ಗೋವಿಂದು ಏಯ್ ಕೂತ್ಕೋ ಅಂತ ಗದರುತ್ತಾರೆ'- ನೀತು...!

ಮಲಯಾಳಂ ಚಿತ್ರರಂಗ ಅಲ್ಲೋಲ..ಕಲ್ಲೋಲವಾಗಿದೆ. ಚಿತ್ರರಂಗದಲ್ಲಿನ ಮಹಿಳೆಯರ ಸ್ಥಿತಿಗತಿಯ ಬಗ್ಗೆ ಅಧ್ಯಯನ ನಡೆಸಿ ನ್ಯಾಯಮೂರ್ತಿ ಕೆ. ಹೇಮಾ ಸಮಿತಿ ಸಲ್ಲಿಸಿದ ವರದಿಯಿಂದ ಮಲಯಾಳಂ ಚಿತ್ರರಂಗದ ಮುಖವಾಡ ಕಳಚಿ ಬಿದ್ದಿದೆ. ಅದು ತೆರೆದಿಟ್ಟಿರುವ ಸತ್ಯ ಕೇವಲ ಮಲಯಾಳಂ ಚಿತ್ರರಂಗವನ್ನಷ್ಟೇ ಅಲ್ಲ, ಭಾರತೀಯ ಚಿತ್ರರಂಗವನ್ನೇ ಬೆಚ್ಚಿ ಬೀಳಿಸಿದೆ. ಇದಕ್ಕೆ ಪೂರಕವಾಗಿ ಹಲವರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಿರುವ ಪುರುಷರ ಮನಸ್ಥಿತಿಯ ಕುರಿತು ಕಿಡಿ ಕಾರುತ್ತಿದ್ದಾರೆ.