ಭಾರತದ ಖ್ಯಾತ ಸಂಗೀತ ಮಾಂತ್ರಿಕ ಇಳಯರಾಜ ಕುರಿತ ಸುದ್ದಿಯೊಂದು ಕೆಲವು ದಿನಗಳ ಹಿಂದಷ್ಟೇ ಹರಿದಾಡಿತ್ತು. ತಮಿಳುನಾಡಿನ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದ ಇಳಯರಾಜಗೆ ಅವಮಾನ ಮಾಡಲಾಗಿದೆ ಎಂದು ವರದಿಯಾಗಿತ್ತು. ತಮಿಳುನಾಡಿನ ಶ್ರೀವಿಲ್ಲಿಪುತ್ತೂರು ಆಂಡಾಳ್ ದೇವಸ್ಥಾನಕ್ಕೆ ಹೋಗಿದ್ದರು. ಆದರೆ, ಇಳಯರಾಜ ಅವರನ್ನು ದೇಗುಲದ ಒಳಗೆ ಬಿಡಲಿಲ್ಲ ಅನ್ನೋ ಸುದ್ದಿ ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು.
ಈ ವಿವಾದದ ಬಗ್ಗೆ ಸಂಗೀತ ನಿರ್ದೇಶಕ ಇಳಯರಾಜ ಸ್ಪಷ್ಟನೆ ಕೊಟ್ಟಿದ್ದಾರೆ. ದೇವಸ್ಥಾನದ ಒಳಗೆ ಅವರಿಗೆ ಪ್ರವೇಶ ನಿರಾಕರಣೆ ಮಾಡಿದೆ ಎನ್ನಲಾದ ವಿಡಿಯೋ ಕೂಡ ಹರಿದಾಡಿತ್ತು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಇಳಯರಾಜ ಬೆಂಬಲಕ್ಕೆ ನಿಂತಿದ್ದರು. ಈಗ ಇದೇ ವಿಷಯವಾಗಿ ಹಬ್ಬಿರುವ ಎಲ್ಲಾ ಸುದ್ದಿಗಳ ಬಗ್ಗೆ ಇಳಯರಾಜ ಖಡಕ್ ಸಂದೇಶವನ್ನು ರವಾನೆ ಮಾಡಿದ್ದಾರೆ.