Current Date 01 Aug, 2026

ನನಗೆ ಯಾರೂ ಕನ್ನಡ ಪಾಠ ಹೇಳಿಕೊಡುವ ಅವಶ್ಯಕತೆ ಇಲ್ಲ; ಡಾಲಿ ಧನಂಜಯ್

ಕನ್ನಡ ನಟ ಧನಂಜಯ್ ಈಗ ಪರಭಾಷಾ ಸಿನಿಮಾಗಳಲ್ಲಿ ಕೂಡ ಬ್ಯುಸಿಯಾಗಿದ್ದಾರೆ. ತೆಲುಗು, ತಮಿಳು ಚಿತ್ರಗಳಲ್ಲಿ ಬಣ್ಣ ಹಚ್ಚಿ ಗಮನ ಸೆಳೆಯುತ್ತಿದ್ದಾರೆ. ಸಿಕ್ಕಾಪಟ್ಟೆ ಬ್ಯುಸಿ ಆಗಿರುವ ಡಾಲಿಗೆ ಕೆಲ ಅವಕಾಶಗಳು ಮಿಸ್ ಆಗುತ್ತಿದೆ. ಈ ವಾರ ಧನು ನಟನೆಯ 'ಜೀಬ್ರಾ' ಸಿನಿಮಾ ತೆರೆಗೆ ಬರ್ತಿದೆ.

ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ 'ಜೀಬ್ರಾ' ಸಿನಿಮಾ ನಿರ್ಮಾಣವಾಗಿದೆ. ತೆಲುಗು ನಟ ಸತ್ಯದೇವ್ ಹೀರೊ ಆಗಿ ನಟಿಸಿದ್ದರೆ ಧನಂಜಯ್ ಒಂದು ಮುಖ್ಯವಾದ ಪಾತ್ರದಲ್ಲಿ ಬಣ್ಣ ಹಚ್ಚಿ ನಟಿಸಿದ್ದಾರೆ. ಶ್ರೀಮಂತ ಉದ್ಯಮಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರಕ್ಕೆ ಚಿತ್ರದಲ್ಲಿ ಬಹಳ ಮಹತ್ವ ಇದೆ. ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಡಾಲಿ ತಲ್ಲೀನರಾಗಿದ್ದಾರೆ.