Current Date 29 Jul, 2026

"ಜನರು ಯಾಕೆ ಆ ಸಿನಿಮಾ ನೋಡುತ್ತಿದ್ದಾರೆ? ನನಗೆ ಅರ್ಥನೇ ಆಗುತ್ತಿಲ್ಲ"; 'ಶಾಸ್ತ್ರಿ' ರಿಲೀಸ್‌ಗೆ ರಾಜ್ ಬಿ ಶೆಟ್ಟಿ ಪ್ರತಿಕ್ರಿಯೆ!


ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ರನ್ನು ಬಂಧಿಸಲಾಗಿದೆ. ದರ್ಶನ್ ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದೇ ಜುಲೈ 18ರಂದು ಮತ್ತೆ ದರ್ಶನ್ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಈ ಗ್ಯಾಪ್‌ನಲ್ಲಿ ಸಿನಿಮಾ ಮಂದಿ ದರ್ಶನ್ ನಟಿಸಿದ 'ಶಾಸ್ತ್ರಿ' ಸಿನಿಮಾವನ್ನು ಮರುಬಿಡುಗಡೆ ಮಾಡುತ್ತಿದ್ದಾರೆ.

2005ರಲ್ಲಿ ದರ್ಶನ್ ನಟಿಸಿದ 'ಶಾಸ್ತ್ರಿ' ಸಿನಿಮಾ ರಿಲೀಸ್ ಆಗಿತ್ತು. ಬಾಕ್ಸಾಫೀಸ್‌ನಲ್ಲೂ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ದರ್ಶನ್ ಮತ್ತೆ ಜೈಲು ಸೇರಿದ ಬೆನ್ನಲ್ಲೇ 19 ವರ್ಷಗಳ ಬಳಿಕ ಮತ್ತೆ ಈ ಸಿನಿಮಾವನ್ನು ಮರು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿತ್ತು. ಅದರಂತೆ ಈಗ ಸಿನಿಮಾ ಕೂಡ ರಿಲೀಸ್ ಆಗಿದ್ದು, ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.