Current Date 22 Sep, 2026

ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು "ದೇಸಾಯಿ" ಚಿತ್ರದ ಹಾಡು .


 ಶ್ರೀವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಲಾಂಛನದಲ್ಲಿ ಮಹಾಂತೇಶ ವಿ ಚೋಳದಗುಡ್ಡ ಕಥೆ ಬರೆದು ನಿರ್ಮಿಸಿರುವ, ನಾಗಿರೆಡ್ಡಿ ಭಡ ನಿರ್ದೇಶನದ ಹಾಗೂ "ಲವ್ 360" ಖ್ಯಾತಿಯ ಪ್ರವೀಣ್ ಕುಮಾರ್ ನಾಯಕನಾಗಿ ನಟಿಸಿರುವ "ದೇಸಾಯಿ" ಚಿತ್ರದ  "ಒಲವು ಮೂಡುವ ಕಾಲವು" ಹಾಡನ್ನು ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿ, ಚಿತ್ರದ  ಟೀಸರ್ ಹಾಗೂ ಹಾಡು ತುಂಬಾ ಚೆನ್ನಾಗಿದೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. ವಿಜಯ್ ಪ್ರಕಾಶ್ ಹಾಗೂ ಅನುರಾಧ ಭಟ್ ಈ ಹಾಡನ್ನು ಹಾಡಿದ್ದಾರೆ .