Current Date 30 Jul, 2026

''ಒಂದೇ ರೂಮ್‌ನಲ್ಲಿ ಸಂಸಾರ ಆರಂಭಿಸಿದಾಗಲೇ ಎಲ್ಲವೂ ಗೊತ್ತಾಗೋದು''- ಚಂದನ್ ಶೆಟ್ಟಿ..!

ಸಿನಿಮಾ ತಾರೆಯರ ಡೇಟಿಂಗು .. ಬ್ರೇಕಪ್ಪು .. ಲವ್ವು- ಡವ್ವುಗಳಿಗೇನೂ ಕಡಿಮೆ ಇಲ್ಲ. ನಿನ್ನೆ ಮೊನ್ನೆ ಜೊತೆ ಜೊತೆಯಲ್ಲಿ ಓಡಾಡಿದರೂ, ಅವಾರ್ಡ್ ಫಂಕ್ಷನ್ ಗಳಲ್ಲಿ ಕಾಣಿಸಿಕೊಂಡವರೂ ಮೂರನೇ ದಿನ ಮದುವೆಯ ಸುದ್ದಿಯನ್ನು ಹರಿಬಿಡುತ್ತಾರೆ. ಇನ್ನೂ ಆದರ್ಶ ದಂಪತಿಗಳಂತೆ ಫೋಸು ಕೊಟ್ಟವರು ಅದ್ಯಾವುದೋ ಕ್ಷುಲ್ಲಕ ಕಾರಣಕ್ಕಾಗಿ ಸಂಬಂಧ ಕಡಿದುಕೊಂಡೂ ಬಿಡುತ್ತಾರೆ. ಇವೆಲ್ಲವೂ ಸೆಲೆಬ್ರೆಟಿಗಳ ಪರ್ಸನಲ್ ಜೀವನದಲ್ಲಿ ಕಾಮನ್ನು. ಇದಕ್ಕೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಸದ್ಯದ ತಾಜಾ ಉದಾಹರಣೆ

ಮನ:ಪೂರ್ವಕವಾಗಿ ಮದುವೆಯಾಗಿ ಮನ:ಪೂರ್ವಕವಾಗಿಯೇ ದೂರವಾದ ಇಬ್ಬರು ಈಗ ತಮ್ಮ ತಮ್ಮ ಬದುಕಿನ ಸಂತೆಯಲ್ಲಿ ನೆಮ್ಮದಿ ಹುಡುಕುತ್ತಿದ್ದಾರೆ. ವಿಚ್ಚೇದನದ ನಂತರ ನಿವೇದಿತಾ ಗೌಡ ರೀಲ್ಸು ಪಾಲ್ಸು ಎಂದು ಮತ್ತೆ ಬ್ಯುಸಿಯಾದರೆ, ಚಂದನ್ ಶೆಟ್ಟಿ ಸಂಗೀತ-ಸಾಹಿತ್ಯ ಎಂದು ತಲೆ ಕೆಡಿಸಿಕೊಂಡಿದ್ದಾರೆ. ಇದರ ನಡುವೆ ಸಮಯ ಬಿಡುವು ಮಾಡಿಕೊಂಡು ಫಿಲ್ಮಿಬೀಟ್‌ ಕನ್ನಡ ಜೊತೆ ಮನ ಬಿಚ್ಚಿ ಮಾತನಾಡಿದ್ದಾರೆ. ಬದುಕು ಹೀಗೆ ಎಂದು ಹೇಳಲು ಸಾಧ್ಯ ಇಲ್ಲವೆಂದಿದ್ದಾರೆ.