Current Date 22 Sep, 2026

ಈ ಬಾರಿಗೂ ದರ್ಶನ್‌ಗೆ ಜಾಮೀನು ಇಲ್ವಾ? ಮನೆಯೂಟ, ಹಾಸಿಗೆ, ಪುಸ್ತಕದ ಬೇಡಿಕೆ ಏನಾಯ್ತು?

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್‌ರನ್ನು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯ ಅವಧಿ ಮುಗಿದ ಬಳಿಕ ಕೋರ್ಟ್ ದರ್ಶನ್‌ಗೆ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿತ್ತು. ಎರಡನೇ ಬಾರಿ ಜುಲೈ 18ರವರೆಗೂ ನ್ಯಾಯಾಂಗ ಅವಧಿಯನ್ನು ವಿಸ್ತರಿಸಲಾಗಿತ್ತು. ಇಂದು (ಜುಲೈ 18) ಆ ಅವಧಿ ಮುಕ್ತಾಯಗೊಳ್ಳಲಿದೆ.

ಇದೇ ವೇಳೆ ದರ್ಶನ್, ಪವಿತ್ರಾ ಗೌಡ ಹಾಗೂ ಅವರ ಸಹಚರರಿಗೂ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿತ್ತು. ಈಗ ಮೂರನೇ ಬಾರಿ ದರ್ಶನ್‌ಗೆ ನ್ಯಾಯಾಂಗ ಬಂಧನವನ್ನು ಮುಂದುವರೆಸುವಂತೆ ಆದೇಶ ನೀಡುತ್ತಾ? ಇಲ್ಲಾ ಜಾಮೀನು ಸಿಗುತ್ತಾ? ಅನ್ನೋದು ಇನ್ನು ಕೆಲವೇ ಕ್ಷಣಗಳಲ್ಲಿ ಗೊತ್ತಾಗಲಿದೆ. ದರ್ಶನ್ ಇನ್ನು ಕೆಲವು ದಿನಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಇರಬೇಕಾಗುತ್ತೆ. ಪೊಲೀಸರು ಚಾರ್ಜ್‌ ಶೀಟ್ ಸಲ್ಲಿಸಿದ ಬಳಿಕವೇ ಜಾಮೀನಿನ ಬಗ್ಗೆ ನಿರ್ಧಾರ ಆಗಲಿದೆ ಎನ್ನಲಾಗಿದೆ.