Current Date 27 Sep, 2026

ಯಾರೂ ನಿಮ್ಮ ಡಿ ಬಾಸ್ ಅನ್ನು ಏನೂ ಮಾಡೋಕೆ ಆಗಲ್ಲ"; ಮೌನ ಮುರಿದ ತಮ್ಮ ದಿನಕರ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಜಾಮೀನು ಸಿಗುತ್ತೋ ಇಲ್ಲವೋ ಅನ್ನೋದೇ ಅವರ ಅಭಿಮಾನಿಗಳಿಗೆ ಯಕ್ಷ ಪ್ರಶ್ನೆಯಾಗಿದೆ. ಕಳೆದ ಮೂರೂವರೆ ತಿಂಗಳನಿಂದ ದರ್ಶನ್ ಜೈಲಿನಲ್ಲಿ ಇದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಪೊಲೀಸರ ಚಾರ್ಜ್‌ಶೀಟ್‌ನಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ ಜಾಮೀನಿಗಾಗಿ ಎದುರು ನೋಡುತ್ತಿದ್ದಾರೆ. ಆದರೆ, ಪ್ರತಿಬಾರಿ ನಿರಾಸೆನೇ ಆಗಿದೆ.