ಕನ್ನಡ ಚಿತ್ರರಂಗದಲ್ಲಿ ಪ್ರಯೋಗಗಳಾಗುವುದು ಕಡಿಮೆ. ಎಲ್ಲೋ ಅಲ್ಲೊಂದು ಇಲ್ಲೊಂದು ಸಿನಿಮಾ ಇದಕ್ಕೆ ಅಪವಾದ ಎಂಬಂತೆ ರೂಪಗೊಳ್ಳುತ್ತವೆ. ಈ ಸಾಲಿಗೆ ಸೇರುವ ''ಟೇಕ್ವಾಂಡೋ ಗರ್ಲ್'' ಚಿತ್ರದ ಟ್ರೈಲರ್‌ನ್ನೂ ಇತ್ತೀಚೆಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಬಿಡುಗಡೆಗೊಳಿಸಿದರು. ಚಿತ್ರತಂಡಕ್ಕೆ ಶುಭ ಕೋರಿದರು.
ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿನ ಕುಲಕ್ಕೆ ಕಂಟಕಪ್ರಾಯವಾದ ಕೃತ್ಯಗಳು ನಡೆಯುತ್ತಲೇ ಬಂದಿದೆ.ಹೆಣ್ಣು ತನ್ನನ್ನು ತಾನು ರಕ್ಷಿಸಿಕೊಳ್ಳುವುದು ಅತೀ ಮುಖ್ಯವಾದ ವಿಚಾರ ಈ ನಿಟ್ಟಿನಲ್ಲಿ ತಯಾರಾದ "ಟೇಕ್ವಾಂಡೋ ಗರ್ಲ್"ದಲ್ಲಿ ಋತು ಸ್ಪರ್ಶ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.