Current Date 31 Jul, 2026

ಕೃಷ್ಣ ಇಲ್ಲದ ಮಹಾಭಾರತ,ಸುದೀಪ್ ಇಲ್ಲದ ಬಿಗ್ ಬಾಸ್ ಊಹಿಸಲೂ ಸಾಧ್ಯವಿಲ್ಲ'

ಕರುನಾಡಿನಲ್ಲಿ ಬಿಗ್ ಬಾಸ್ ಕಾರ್ಯಕ್ರಮ ಈ ಪರಿ ಯಶಸ್ವಿಯಾಗಲು ಕಾರಣ ಸುದೀಪ್. ಹನ್ನೊಂದು ವರ್ಷದಿಂದ ನಿರಂತರವಾಗಿ ಈ ಕಾರ್ಯಕ್ರಮವನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಬಂದ ಸುದೀಪ್ ಈ ಕಾರ್ಯಕ್ರಮಕ್ಕೆ ದುಡ್ಡನ್ನು ಮೀರಿದ ಶ್ರಮವನ್ನು ಧಾರೆಯೆರೆದಿದ್ದಾರೆ. ಇದು ಆ ವಾಹಿನಿ ಈ ವಾಹಿನಿಯ ಕಾರ್ಯಕ್ರಮ ಎನ್ನದೇ ಯಾವುದೇ ಮೂಲೆಯಲ್ಲಿ ಇದ್ದರೂ ಬಿಗ್ ಬಾಸ್ ಕಾರ್ಯಕ್ರಮಕ್ಕೆ ತೊಡಗಿಸಿಕೊಂಡಿದ್ದಾರೆ. ನಿದ್ರೆಯನ್ನು ಕೂಡ ಮರೆತು ಬಿಗ್ ಬಾಸ್‌ಗೋಸ್ಕರ ಬೆವರು ಸುರಿಸಿದ್ಧಾರೆ.