2024ರಲ್ಲಿ ಕನ್ನಡ ಚಿತ್ರರಂಗಕ್ಕೆ ಹೊಸ ಹುರುಪು ಕೊಟ್ಟ ಸಿನಿಮಾಗಳಲ್ಲಿ 'ಕೃಷ್ಣಂ ಪ್ರಣಯ ಸಖಿ' ಕೂಡ ಒಂದು. ಕಳೆದ ಆಗಸ್ಟ್ ತಿಂಗಳಲ್ಲಿ ತೆರೆಕಂಡ ಸಿನಿಮಾ ಗೋಲ್ಡನ್ ಸ್ಟಾರ್ ಗಣೇಶ್ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಉತ್ತಮ ಕಲೆಕ್ಷನ್ ಮಾಡಿದೆ. ಪಕ್ಕಾ ಫ್ಯಾಮಿಲಿ ಸಿನಿಮಾಗೆ ಕರ್ನಾಟಕದಲ್ಲಿ ಉತ್ತರ ರೆಸ್ಪಾನ್ಸ್ ಸಿಕ್ಕಿದೆ.
ಈ ಸಿನಿಮಾ ಮೂಲಕ ಮತ್ತೆ ಗಣೇಶ್ ಪಾಲಿಗೆ ಗೋಲ್ಡನ್ ಡೇಸ್ ಶುರುವಾಗಿರುವ ಲಕ್ಷಣ ಕಂಡು ಬಂದಿದೆ. ಸದ್ಯ ಯಶಸ್ಸಿನ ಖುಷಿಯಲ್ಲಿ ತೇಲಾಡುತ್ತಿರುವ 'ಕೃಷ್ಣಂ ಪ್ರಣಯ ಸಖಿ' ಸಿನಿಮಾತಂಡ ದುಬೈಗೂ ಕಾಲಿಟ್ಟಿತ್ತು. ಅಲ್ಲಿನ ಕನ್ನಡಿಗರಿಗಾಗಿ ವಿಶೇಷ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು.