Current Date 22 Sep, 2026

14 ದಿನ ಜೈಲಿನಲ್ಲಿದ್ದಾಗ ಕಲಿತ ಪಾಠವನ್ನು ದರ್ಶನ್ ಅಷ್ಟು ಬೇಗ ಮರೆತುಬಿಟ್ರಾ?

ನಟ ದರ್ಶನ್‌ಗೆ ಪೊಲೀಸ್ ಸ್ಟೇಷನ್, ಕೋರ್ಟು, ಕೇಸು, ಜೈಲು, ವಿವಾದಗಳು ಹೊಸದೇನು ಅಲ್ಲ. ಈ ಹಿಂದೆ ಕೂಡ 14 ದಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದು ಬಂದವರು. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಎ2 ಆಗಿರುವುದರಿಂದ ಸದ್ಯಕ್ಕೆ ಬೇಲ್ ಸಿಗುವುದು ಕಷ್ಟ, ಆರೋಪ ಸಾಬೀತಾದರೆ ಕಠಿಣ ಶಿಕ್ಷೆ ಗ್ಯಾರಂಟಿ ಎನ್ನುವ ಚರ್ಚೆ ನಡೀತಿದೆ

ತಮ್ಮ ಪ್ರೇಯಸಿ ಪವಿತ್ರಾ ಗೌಡಗೆ ಕೆಟ್ಟ ಮೆಸೇಜ್ ಕಳುಹಿಸಿದ್ದಾನೆ ಎನ್ನುವ ಕಾರಣಕ್ಕೆ ರೇಣುಕಾಸ್ವಾಮಿಯನ್ನು ಅಪಹರಿಸಿ, ಹತ್ಯೆ ಮಾಡಿರುವ ಗಂಭೀರ ಆರೋಪ ದರ್ಶನ್ ಮೇಲಿದೆ. ಪ್ರಕರಣ ಸಂಬಂಧ 13 ಜನರನ್ನು ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆತಂದು ಪಟ್ಟಣಗೆರೆಯ ಶೆಡ್‌ನಲ್ಲಿ ಕೂಡಿ ಹಾಕಿ ಥಳಿಸಲಾಗಿದೆ. ಚಿತ್ರಹಿಂಸೆ ನೀಡಿದ್ದು ಆತ ಜೀವಬಿಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ.