Current Date 14 Jul, 2025

ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲಂ ಸಿಟಿ ಮಾಡಲು ಸಿ ಎಂ ಘೋಷಣೆ.

ಇಂದು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ, ಸಿಎಂ ಸಿದ್ದರಾಮಯ್ಯ ನವರು ಮೈಸೂರಿನಲ್ಲಿ 150 ಎಕರೆ ಪ್ರದೇಶದಲ್ಲಿ ಬೃಹತ್ ಫಿಲ್ಮ್ ಸಿಟಿ ನಿರ್ಮಾಣಕ್ಕಾಗಿ ಜಾಗವನ್ನು ನೀಡಲಾಗಿದೆ ಎಂದು ಘೋಷಿಸಿದರು. ಅವರು ತಂತ್ರಜ್ಞಾನ ಜೊತೆಗೆ ಮಾನವೀಯ ಮೌಲ್ಯಗಳನ್ನು ಒತ್ತಿಹೇಳುವ ಚಿತ್ರಗಳು ಇಲ್ಲಿ ವಿಶ್ವದರ್ಜೆಯ ಗುಣಮಟ್ಟದಲ್ಲಿ ನಿರ್ಮಾಣವಾಗಬೇಕೆಂದು ತಮ್ಮ ಆಸೆಯನ್ನು ವ್ಯಕ್ತಪಡಿಸಿದರು.