Current Date 17 May, 2025

"ಗೌರಿ" ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಲ್ಲಿ ನಟ ಉಪೇಂದ್ರ .

 ಇಂದ್ರಜಿತ್ ಲಂಕೇಶ್ ನಿರ್ದೇಶನದ ಹಾಗೂ ಸಮರ್ಜಿತ್ ಲಂಕೇಶ್ ಅಭಿನಯದ ಈ ಚಿತ್ರ ಆಗಸ್ಟ್ 15 ರಂದು ತೆರೆಗೆ .

ಇಂದ್ರಜಿತ್ ಲಂಕೇಶ್ ನಿರ್ಮಾಣ ಹಾಗೂ ನಿರ್ದೇಶನದಲ್ಲಿ, ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ "ಗೌರಿ" ಚಿತ್ರದ ಪ್ರೀ ರಿಲೀಸ್ ಇವೆಂಟ್ ಅದ್ದೂರಿಯಾಗಿ ನೆರವೇರಿದೆ. ರಿಯಲ್ ಸ್ಟಾರ್ ಉಪೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಿ "ಗೌರಿ" ಚಿತ್ರಕ್ಕೆ ಸಾಥ್ ನೀಡಿದ್ದಾರೆ. ಪ್ರೀ ರಿಲೀಸ್ ಇವೆಂಟ್ ನಲ್ಲಿ ಫ್ಯಾಷನ್ ಶೋ ಸಹ ಆಯೋಜಿಸಲಾಗಿತ್ತು. ನಾಯಕ ಸಮರ್ಜಿತ್ ಹಾಗೂ ನಾಯಕಿ ಸಾನ್ಯಾ ಅಯ್ಯರ್ ಭಾಗಿಯಾಗಿದ್ದರು. ನಂತರ ಉಪೇಂದ್ರ ಅವರು ಹಾಗು ಚಿತ್ರತಂಡದ ಸದಸ್ಯರು ಮಾತನಾಡಿದರು.

ಸಿನಿಮಾ ಒಂದು ಕ್ರಿಯಾಶೀಲ ಮಾಧ್ಯಮ. ಪ್ರತಿ ಕ್ಷಣ ಯೋಚನೆ ಮಾಡಿ, ಏನಾದರೂ ಹೊಸತನ ತರುತ್ತಾರೆ ಎಂದರೆ ಅದು ಉಪೇಂದ್ರ. ಅವರು ಕನ್ನಡ ಚಿತ್ರರಂಗದಲ್ಲಿರುವುದು ನಮ್ಮ ಅದೃಷ್ಟ. ಉಪ್ಪಿ ಸಾರ್ ಅವರು ತಮ್ಮ ಬುದ್ಧಿವಂತಿಕೆಯಿಂದ ಮತ್ತು ಕ್ರಿಯಾಶೀಲತೆಯಿಂದ ಕನ್ನಡ ಚಿತ್ರರಂಗಕ್ಕೆ ದೊಡ್ಡ ಹೆಸರು ತಂದಿದ್ದಾರೆ. 

ನಾಯಕ ಸಮರ್ಜಿತ್ ಲಂಕೇಶ್ ಹಾಗೂ ನಾಯಕಿ ಸಾನ್ಯಾ ಅಯ್ಯರ್ ತಮ್ಮ ಮೊದಲ ಚಿತ್ರಕ್ಕೆ ಪ್ರೋತ್ಸಾಹ ನೀಡಬೇಕೆಂದು ವಿನಂತಿಸಿದರು.