Current Date 21 Jan, 2026

ಮೇ‌ 30 ರಂದು ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ಬಹು ನಿರೀಕ್ಷಿತ “ಮಾದೇವ” ಚಿತ್ರ ತೆರೆಗೆ .

ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ಮಾದೇವ” ಚಿತ್ರ ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಮೇ 30 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

“ಖಾಕಿ” ಚಿತ್ರದ ನಂತರ ನವೀನ್ ರೆಡ್ಡಿ ಅವರು ಈ ಚಿತ್ರ ನಿರ್ದೇಶಿಸಿದ್ದು, ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಪ್ರದ್ಯೋತನ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.