ಕರ್ನಾಟಕದ ಖ್ಯಾತ ನಟ, ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕ ಡಾ. ಸಾದು ಕೋಕಿಲ ಅವರು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (KFCC) ಭೇಟಿನೀಡಿ, ಮಾರ್ಚ್ 1ರಿಂದ ಆರಂಭವಾಗುವ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ (BIFFes) ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಅವರು ಮಂಡಳಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಇತರ ಗಣ್ಯ ವ್ಯಕ್ತಿಗಳಿಗೆ ಚಲನಚಿತ್ರೋತ್ಸವಕ್ಕೆ ಅಧಿಕೃತ ಆಹ್ವಾನವನ್ನು ನೀಡಿದರು.