ಯುವ ರಾಜ್ಕುಮಾರ್ ಕನ್ನಡ ಚಿತ್ರರಂಗದ ಭರವಸೆಯ ನಟನಾಗಿ ಗುರುತಿಸಿಕೊಂಡಿದ್ದು, ಸದ್ಯ ತಮ್ಮ ಎರಡನೇ ಸಿನಿಮಾ ಬಿಡುಗಡೆಯಲ್ಲಿ ಬ್ಯುಸಿಯಾಗಿದ್ದಾರೆ. ಯುವ ನಟನೆಯ ‘ಎಕ್ಕ’ ಸಿನಿಮಾ ಚಿತ್ರೀಕರಣ ಮುಗಿಸಿದ್ದು ಬಿಡುಗಡೆಗೆ ರೆಡಿಯಾಗಿದೆ. ಸಿನಿಮಾದ ಪ್ರಚಾರ ಕಾರ್ಯ ಪ್ರಾರಂಭ ಆಗಿದೆ. ಟೀಸರ್ , ಹಾಡುಗಳು ಬಿಡುಗಡೆಯಾಗಿದ್ದು, ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ‘ಎಕ್ಕ’ ಸಿನಿಮಾದ ಸುದ್ದಿಗೋಷ್ಠಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಯುವರಾಜ್ ಕುಮಾರ್ ಹಾಗೂ ಇಡೀ ತಂಡ ಹಾಜರಿದ್ದರು.