Current Date 24 Aug, 2026

ದೀಪಿಕಾ ದಾಸ್ ಅಭಿನಯದ #ಪಾರು ಪಾರ್ವತೀ ಟ್ರೈಲರ್ ಟ್ರೆಂಡಿಂಗ್ ನತ್ತ .

EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಂನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ “ಬಿಗ್ ಬಾಸ್” ಖ್ಯಾತಿಯ ದೀಪಿಕಾ ದಾಸ್ಪೂನಂ ಸಿರ್ ನಾಯಕ್ ಹಾಗೂ ಫವಾಜ್ ಅಶ್ರಫ್ ಅವರು ಪ್ರಮುಖಪಾತ್ರದಲ್ಲಿ ನಟಿಸಿರುವ “#ಪಾರುಪಾರ್ವತಿ” ಚಿತ್ರದ ನಾಲ್ಕನೇ ಪ್ರಮುಖಪಾತ್ರಧಾರಿಯನ್ನು ಇಂದು ಚಿತ್ರತಂಡ ಪರಿಚಯಿಸಿತು. ಜತೆಗೆ ಚಿತ್ರದ ಬಿಡುಗಡೆ ದಿನಾಂಕ ಸಹ ಘೋಷಣೆಯಾಯಿತು. ಆ ಪ್ರಮುಖಪಾತ್ರಧಾರಿ ಬೇರೆ ಯಾರು ಅಲ್ಲ. ಚಿತ್ರದಲ್ಲಿ ಎಂಟು ರಾಜ್ಯಗಳನ್ನು ಸುತ್ತಿದೆ ಈ ಕಾರು. ಈ‌ ವಿಷಯಗಳ ಬಗ್ಗೆ ಮಾಹಿತಿ ನೀಡಲು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಮಾತನಾಡಿದ್ದು ಹೀಗೆ.