ಟಾಲಿವುಡ್ ನಟ, ರೆಬೆಲ್ ಸ್ಟಾರ್ ಪ್ರಭಾಸ್ ಅಭಿನಯದ, ಮಾರುತಿ ನಿರ್ದೇಶನದ "ದಿ ರಾಜಾಸಾಬ್" ಸಿನಿಮಾ, ಈಗಾಗಲೇ ದೊಡ್ಡ ಮಟ್ಟದ ಹೈಪ್ ಕ್ರಿಯೇಟ್ ಮಾಡಿದೆ. ಮೇಕಿಂಗ್ ಮೂಲಕ ಗಮನ ಸೆಳೆದ ಈ ಸಿನಿಮಾದ ಮೊದಲ ಟೀಸರ್ ಇದೀಗ ಬಿಡುಗಡೆ ಆಗಿದೆ. ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಟಿ ಜಿ ವಿಶ್ವ ಪ್ರಸಾದ್ ಈ ಚಿತ್ರದ ನಿರ್ಮಾಪಕರು.
"ರಾಜಾಸಾಬ್ ಒಂದು ಪ್ರಕಾರದ ಪ್ರಯಾಣ - ಇದು ಭಯಾನಕ ಮತ್ತು ಫ್ಯಾಂಟಸಿ, ನೈಜ ಮತ್ತು ಅತಿವಾಸ್ತವಿಕತೆಯ ನಡುವೆ ಹರಿಯುತ್ತದೆ. ಥಮನ್ ಅವರ ರೋಮಾಂಚಕಾರಿ ಸಂಗೀತ ಇಡೀ ಸಿನಿಮಾದ ಹೈಲೈಟ್ ಎಂದಿದ್ದಾರೆ ನಿರ್ದೇಶಕ ಮಾರುತಿ.