Current Date 15 Dec, 2025

Renukaswamy Viral Photo: ಜೀವಕ್ಕಾಗಿ ಅಂಗಲಾಚಿದ್ದ ರೇಣುಕಾಸ್ವಾಮಿ; ಅಯ್ಯೋ ಅನಿಸುತ್ತೆ ಈ ಎರಡು ಫೋಟೋ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಅವರ ಗ್ಯಾಂಗ್ ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆರೋಪಿ ಸ್ಥಾನದಲ್ಲಿರುವ ಇವರ ವಿರುದ್ಧ ಈಗ ಪ್ರಬಲವಾದ ಸಾಕ್ಷಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಲೇ ಇದ್ದವು. ಈಗ ಅದಕ್ಕೊಂದು ಪ್ರಬಲ ಸಾಕ್ಷಿ ಸಿಕ್ಕಿದೆ.

ರೇಣುಕಾಸ್ವಾಮಿ ಸಾಯುವುದಕ್ಕೂ ಮುನ್ನ ದರ್ಶನ್ ಹಾಗೂ ಪವಿತ್ರಾ ಗೌಡ ಮುಂದೆ ಅಂಗಲಾಚಿ ಬೇಡಿಕೊಂಡಿದ್ದ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಪೊಲೀಸ್ ಮೂಲಗಳಿಂದ ಸಿಕ್ಕಿದ್ದ ಮಾಹಿತಿಯನ್ನಷ್ಟೇ ಪ್ರಸಾರ ಮಾಡಲಾಗಿತ್ತು. ಈಗ ರೇಣುಕಾಸ್ವಾಮಿ ಸಾಯುವುದಕ್ಕೂ ಮುನ್ನ ನಿಜವಾಗಿಯೂ ಅಂಗಲಾಚಿ ಬೇಡಿಕೊಂಡಿದ್ದ ಅನ್ನೋದಕ್ಕೆ ಸಾಕ್ಷಿ ಸಿಕ್ಕಿದ್ದು, ಆ ಫೋಟೋ ವೈರಲ್ ಆಗಿದೆ.