Current Date 12 Nov, 2025

ರಾಜಸ್ಥಾನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ "ದಿ ಡೆವಿಲ್" ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ

ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ "ದಿ ಡೆವಿಲ್" ಚಿತ್ರದ ಚಿತ್ರೀಕರಣ  ರಾಜಸ್ಥಾನದಲ್ಲಿ ಬಿರುಸಿನಿಂದ ಸಾಗಿದೆ. ಮಾತಿನ ಭಾಗದ ಚಿತ್ರೀಕರಣ ನಡೆಯುತ್ತಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್,  ರಚನ ರೈ, ಮಹೇಶ್ ಮಂಜ್ರೇಕರ್, ಅಚ್ಯುತಕುಮಾರ್ ಮುಂತಾದ ಕಲಾವಿದರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. 

ಸುಧಾಕರ್.ಎಸ್.ರಾಜ್ ಅವರ ಛಾಯಾಗ್ರಹಣವಿರುವ "ದಿ ಡೆವಿಲ್"  ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್  ಸಂಗೀತ ನಿರ್ದೇಶನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನವಿದೆ.

ದರ್ಶನ್ ಅವರಿಗೆ ನಾಯಕಿಯಾಗಿ  ರಚನ ರೈ ಅಭಿನಯಿಸುತ್ತಿದ್ದಾರೆ. ತುಳಸಿ,‌ ಅಚ್ಯುತಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸಪ್ರಭು , ಶೋಭ್ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.