Current Date 22 Sep, 2026

ಮಹಿಳಾ ಪ್ರಧಾನ ಮರ್ಡರ್ ಮಿಸ್ಟ್ರಿ “ಕ್ಯಾನ್ಬೆರಿ ಬೇಬೀಸ್”ಗೆ ಮುಹೂರ್ತ...!

ಕನ್ನಡ ಚಿತ್ರರಂಗದಲ್ಲಿ ಮಹಿಳಾ ನಿರ್ದೇಶಕಿಯರ ಸಂಖ್ಯೆ ತೀರ ವಿರಳ.ಇತ್ತೀಚೆಗೆ ಕೆಲ ಮಹಿಳಾ ತಂತ್ರಜ್ಞರುಗಳು ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅಂಥವರಲ್ಲಿ ಶ್ರೀಪಲ್ಲವಿ ಕೂಡ ಒಬ್ಬರು. ಇವರೊಂದು ಮಹಿಳಾಪ್ರಧಾನ ಸಸ್ಪೆನ್ಸ್, ಥ್ರಿಲ್ಲರ್, ಮರ್ಡರ್ ಮಿಸ್ಟ್ರಿ ಕಾನ್ಸೆಪ್ಟ್ ಇಟ್ಟುಕೊಂಡು "ಕ್ಯಾನ್ಬೆರಿ ಬೇಬೀಸ್" ಎಂಬ ಚಿತ್ರವನ್ನು ನಿರ್ದೇಶನ ಮಾಡಹೊರಟಿದ್ದಾರೆ.


5 ಜನ ಯುವತಿಯರ ಸುತ್ತ ನಡೆಯುವ ಕಥೆ ಹೊಂದಿದ ಕ್ಯಾನ್ಬೆರಿ ಬೇಬೀಸ್ ಚಿತ್ರದ ಮುಹೂರ್ತ ಸಮಾರಂಭ ಕಳೆದ ಗುರುವಾರ ಬೆಂಗಳೂರಿನ ಶ್ರೀ ಬಲಮುರಿ ಬಾಲಚಂದ್ರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು.